Saturday, July 18, 2026
Homeಕರಾವಳಿಮಂಗಳೂರು: ದೇವಸ್ಥಾನದ ಕಾಣಿಕೆ ಹುಂಡಿಗಳ ಎಣಿಕೆಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ: ಡಿಸಿ

ಮಂಗಳೂರು: ದೇವಸ್ಥಾನದ ಕಾಣಿಕೆ ಹುಂಡಿಗಳ ಎಣಿಕೆಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ: ಡಿಸಿ

- Advertisement -
- Advertisement -

ಮಂಗಳೂರು: ಇಲ್ಲಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಒಬ್ಬರು ಕಾಣಿಕೆ ಹುಂಡಿ ಎಣಿಕೆ ವೇಳೆ ಹಣ ಕಳವು ಮಾಡಿರುವ ಆರೋಪ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ವಿಷಯ ಜಿಲ್ಲಾಡಳಿತದ ಗಮನಕ್ಕೂ ಬಂದಿದೆ. ಜಿಲ್ಲಾಡಳಿತವು ದೇವಾಲಯಗಳಲ್ಲಿ ಹುಂಡಿಗಳ ಮೂಲಕ ಸ್ವೀಕರಿಸಿದ ಕಾಣಿಕೆಗಳ ಎಣಿಕೆಗೆ ಮಾರ್ಗಸೂಚಿಗಳನ್ನು ರೂಪಿಸಲು ಯೋಜಿಸಿದೆ.

ಸ್ವೀಕರಿಸಿದ ದೇಣಿಗೆಯನ್ನು ಎಣಿಸಲು ಇದುವರೆಗೆ ಯಾವುದೇ ನಿರ್ದಿಷ್ಟ ವಿಧಾನ ಅಥವಾ ಮಾರ್ಗಸೂಚಿಗಳಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಹೇಳಿದ್ದಾರೆ. ಮುಂದಿನ ಸೋಮವಾರ ಧಾರ್ಮಿಕ ಪರಿಷತ್ ಸಭೆ ನಡೆಸಲು ಉದ್ದೇಶಿಸಲಾಗಿದ್ದು, ಹಣ ಎಣಿಕೆಗೆ ಮಾರ್ಗಸೂಚಿ ರೂಪಿಸುವ ಕುರಿತು ನಿರ್ಣಯ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದರು.

ಈ ನಡುವೆ ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಟ್ರಸ್ಟೀ ಎಚ್‌.ಕೆ ಪುರುಷೋತ್ತಮ ಅವರು ಕದ್ರಿ ಠಾಣೆಗೆ ದೂರು ನೀಡಿ, ಟ್ರಸ್ಟಿಯೊಬ್ಬರು ದೇವಸ್ಥಾನದ ಹುಂಡಿಯನ್ನು ಕದ್ದಿರುವ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ. ಅಲ್ಲದೆ ಸತ್ಯವನ್ನು ಬಹಿರಂಗಪಡಿಸುವಂತೆ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!