Thursday, June 4, 2026
Homeಕರಾವಳಿಬಂಟ್ವಾಳ : ಬುಡೋಳಿಯಲ್ಲಿ ಆಟೋ- ಟೆಂಪೋ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಬುಡೋಳಿಯಲ್ಲಿ ಆಟೋ- ಟೆಂಪೋ ನಡುವೆ ಅಪಘಾತ: ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ: ಆಟೋ- ಟೆಂಪೋ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ. ಆಟೋ ರಿಕ್ಷಾ ಪಲ್ಟಿ ಹೊಡೆದು ಬಳಿಕ ಟೆಂಪೋ ಟ್ರಾವೆಲ್ಲರ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಗಾಯಗೊಂಡಿದ್ದಾರೆ. ನಿನ್ನೆ ಮಧ್ಯರಾತ್ರಿ ಘಟನೆ ಸಂಭವಿಸಿದೆ.

ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಅಟೋ ರಿಕ್ಷಾ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಬುಡೋಳಿ ವಿಸ್ಡಂ ಶಾಲೆಯ ಎದುರು ಅಪಘಾತ ಸಂಭವಿಸಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಂಜೇಶ್ವರ ನಿವಾಸಿಗಳು ಇಬ್ಬರು ಗಂಭೀರ ಗಾಯಗೊಂಡಿದ್ದು, ಮತ್ತೊಬ್ಬನಿಗೆ ಸಣ್ಣಪುಟ್ಟ ಗಾಯವಾಗಿದೆ. ಮಧ್ಯರಾತ್ರಿ 2 ಗಂಟೆಗೆ ಅಪಘಾತ ಸಂಭವಿಸಿದ್ದು, ತಕ್ಷಣವೇ ಕಾರ್ಯಪ್ರವರ್ತರಾದ ಸೋಷಿಯಲ್ ಇಕ್ವ ಮಾಣಿಯ ಆಂಬ್ಯುಲೆನ್ಸ್ ನ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!