- Advertisement -
- Advertisement -
ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ NH – 75 ರ ಶಿರಾಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು, ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಟ್ರಾವೆಲರ್ ಸುಮಾರು 60 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಶಿರಾಡಿ ಎಂಬಲ್ಲಿ ಘಟನೆ ನಡೆದಿದ್ದು, ಐವರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- Advertisement -