Tuesday, April 30, 2024
Homeಕರಾವಳಿಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರಲು 10 ಚೆಕ್ ಪೋಸ್ಟ್

ಕೇರಳದಿಂದ ದಕ್ಷಿಣ ಕನ್ನಡಕ್ಕೆ ಬರಲು 10 ಚೆಕ್ ಪೋಸ್ಟ್

spot_img
- Advertisement -
- Advertisement -

ಮಂಗಳೂರು: ಕೋವಿಡ್ -19 ಕುರಿತಂತೆ ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಚೆಕ್ ಪೋಸ್ಟ್ ತೆರೆಯಲಾಗಿದೆ. ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವವರನ್ನು ತಪಾಸಣೆ ನಡೆಸುವ ಉದ್ದೇಶದಿಂದ ಚೆಕ್ ಪೋಸ್ಟ್ ತೆರೆಯಲಾಗಿದೆ. ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ವಿಟ್ಲ, ಪುತ್ತೂರು ಗ್ರಾಮಾಂತರ ಠಾಣೆಗಳ ವ್ಯಾಪ್ತಿಯಲ್ಲಿ ತಲಾ 3 ಮತ್ತು ಸುಳ್ಯ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 4 ಚೆಕ್ ಪೋಸ್ಟ್ ತೆರೆಯಲಾಗಿದೆ. ಈ ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ವ್ಯಾಕ್ಸಿನ್ ಸ್ಟೇಟಸ್, ನೆಗೆಟಿವ್ ರಿಪೋರ್ಟ್ ತಪಾಸಣೆ ಮಾಡಲಾಗುತ್ತದೆ. ಅಲ್ಲದೇ ಅವಶ್ಯ ಬಿದ್ದಲ್ಲಿ ಆರ್ ಎಟಿ ಮತ್ತು ಆರ್ ಟಿಪಿಸಿಆರ್ ಟೆಸ್ಟ್ ನಡೆಸಲಾಗುತ್ತದೆ.

ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರಡ್ಕ, ಸಾಲೆತ್ತೂರು ಮತ್ತು ಕನ್ಯಾನದಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ‌. ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಮೇನಾಲ, ಸ್ವರ್ಗ ಮತ್ತು ಸುಳ್ಯಪದವಿನಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರೂರು, ಮಂಡೆಕೋಲು, ಬಡ್ಡಡ್ಕ ಮತ್ತು ಕನ್ನಡಿತೋಡು ನಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಹೀಗಾಗಿ ನಾಳೆಯಿಂದ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವವರು ಕೋವಿಡ್ ವ್ಯಾಕ್ಸಿನ್ ರಿಪೋರ್ಟ್, ನೆಗೆಟಿವ್ ರಿಪೋರ್ಟ್ ಹೊಂದಿರಲೇಬೇಕಿದೆ. ಇಲ್ಲದಿದ್ದಲ್ಲಿ ಚೆಕ್ ಪೋಸ್ಟ್ ನಲ್ಲಿ ಪರೀಕ್ಷೆಗೆ ಒಳಪಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಈ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನಿಂದ ಹೊರತುಪಡಿಸಿದೆ.

- Advertisement -
spot_img

Latest News

error: Content is protected !!