- Advertisement -
![]()
- Advertisement -
ವಿಶಾಖಪಟ್ಟಣ: ಆಂಧ್ರಪ್ರದೇಶ ರಾಜ್ಯದಲ್ಲಿ ಮತ್ತೊಂದು ಭೀಕರ ಕಾಲ್ತುಳಿತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿರುವ ಕಾಲ್ತುಳಿತಕ್ಕೆ ಹತ್ತು ಜನ ಬಲಿಯಾಗಿದ್ದಾರೆ.
ಮಹಿಳೆಯರು ಮತ್ತು ಮಕ್ಕಳು ಸೇರಿ ಹತ್ತು ಭಕ್ತರು ಬಲಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಏಕಾದಶಿ ದಿನವಾಗಿರುವ ಹಿನ್ನಲೆಯಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಇಂದು ಭಕ್ತರು ಭೇಟಿ ನೀಡಿದ್ದು, ದೇವರ ವಿಗ್ರಹದ ಮೆರವಣಿಗೆ ವೇಳೆ ಭಕ್ತರು ಏಕಾಏಕಿ ಮುಂದೆ ನುಗ್ಗಿದ ಪರಿಣಾಮ ಅನಾಹುತ ಸಂಭವಿಸಿದೆ.
ಕೂಡಲೇ ಸೂಕ್ತ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೂಚನೆ ನೀಡಿದ್ದಾರೆ.
- Advertisement -


