Wednesday, May 8, 2024
Homeಕರಾವಳಿಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ...! ಆರೋಪಿಗೆ 10 ವರ್ಷ ಜೈಲು...!

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ…! ಆರೋಪಿಗೆ 10 ವರ್ಷ ಜೈಲು…!

spot_img
- Advertisement -
- Advertisement -

ಮಂಗಳೂರು: ಕೆಲವು ವರ್ಷಗಳ ಹಿಂದೆ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ ಆರೋಪಿಗೆ ಶಿವಮೊಗ್ಗ ಮೂಲದ ರಾಜು ಯಾನೆ ರಾಜ (36) ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲುಶಿಕ್ಷೆ ಹಾಗೂ 16000 ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

ಆರೋಪಿ ರಾಜು ಯಾನೆ ರಾಜ ಸಂತ್ರಸ್ತ ಬಾಲಕಿಯ ಸಂಬಂಧಿಕನಾಗಿದ್ದಾನೆ. ಆತ ಮತ್ತು ಸಂತ್ರಸ್ತ ಬಾಲಕಿ, ಬಾಲಕಿಯ ತಾಯಿ ಮತ್ತು ಹಿರಿಯ ಸಹೋದರಿ 2015ರಲ್ಲಿ ಶಿವಮೊಗ್ಗದಿಂದ ಮಂಗಳೂರಿಗೆ ಬಂದು ಬಿಕರ್ನಕಟ್ಟ ಕೈಕಂಬದ ಬಳಿ ಒಂದೇ ಮನೆಯಲ್ಲಿ ವಾಸವಾಗಿದ್ದರು. 2015ರ ಸೆಪ್ಟಂಬರ್ ತಿಂಗಳಲ್ಲಿ ಬಾಲಕಿಯ ತಾಯಿ ಕೂಲಿ ಕೆಲಸಕ್ಕೆ ಹಾಗೂ ಹಿರಿಯ ಸಹೋದರಿ ಶಾಲೆಗೆ ಹೋಗಿದ್ದರು. ಈ ವೇಳೆ ಸಂತ್ರಸ್ತ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿ ರಾಜು ಆಕೆಯನ್ನು ಅತ್ಯಾಚಾರ ಎಸಗಿದ್ದನು. ಆ ಬಳಿಕ ಪದೇಪದೇ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿತ್ತು.

2015ರ ಡಿಸೆಂಬರ್‌ನಲ್ಲಿ ಆಕೆ ಹೊಟ್ಟೆ ನೋವು ಎಂದು ಹೇಳಿದ್ದಳು. ಈ ವೇಳೆ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಬಾಲಕಿ ಗರ್ಭಿಣಿ ಆಗಿರುವುದು ಬೆಳಕಿಗೆ ಬಂದಿತ್ತು. ಇದರ ಬೆನ್ನಲ್ಲೇ ನಗರದ ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ರಾಜು ವಿರುದ್ಧ ಅತ್ಯಾಚಾರ ಆರೋಪದಡಿ 2015ರ ಡಿಸೆಂಬರ್ 12ರಂದು ಪೊಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಾಗಿತ್ತು.

ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ನಡುವೆ ಬಾಲಕಿಗೆ ಗರ್ಭ ಪಾತವಾಗಿದ್ದು, ಡಿಎನ್‌ಎ ಪರೀಕ್ಷೆಯಲ್ಲಿ ಆಕೆ ಗರ್ಭವತಿಯಾಗಲು ಆರೋಪಿ ರಾಜು ಕಾರಣ ಎಂದು ಸಾಬೀತಾಗಿತ್ತು. ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಕಲಾವತಿ ತನಿಖೆ ನಡೆಸಿ, ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಸಾವಿತ್ರಿ ವಿ. ಭಟ್ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ, ಆರೋಪಿಗೆ ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದರು.ಸಂತ್ರಸ್ತ ಬಾಲಕಿಗೆ ಸರಕಾರದಿಂದ ಮೂರು ಲಕ್ಷ ರೂ. ಪರಿಹಾರವನ್ನು ಒದಗಿಸಬೇಕು ಎಂದು ನ್ಯಾಯಾಧೀಶರು ಆದೇಶಿದ್ದಾರೆ.

- Advertisement -
spot_img

Latest News

error: Content is protected !!