Friday, September 29, 2023
Homeತಾಜಾ ಸುದ್ದಿಗೃಹ ಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಗೃಹ ಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು : ಗೃಹ ಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ ಎಂದ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ  ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಾಡಿಗೆದಾರರಿಗೆ ಉಚಿತ ವಿದ್ಯುತ್ ನೀಡಲ್ಲ ಎಂಬುದು ಸುಳ್ಳು, ಬಾಡಿಗೆದಾರರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸಿಗಲಿದೆ.200 ಯೂನಿಟ್ ಒಳಗೆ ವಿದ್ಯುತ್ ಉಪಯೋಗಿಸುವ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುವುದು ಎಂದಿದ್ದಾರೆ.

ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ನಾಲ್ಕು ಗ್ಯಾರಂಟಿಗಳಿಗೆ ಅಧಿಕೃತ ಆದೇಶವನ್ನು ಕೂಡ ಹೊರಡಿಸಿದೆ. ಹೀಗೆ ಹೊರಡಿಸಿದಂತ ಅಧಿಕೃತ ಆದೇಶದ ಮಾರ್ಗಸೂಚಿಯಲ್ಲಿ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಶಕ್ತಿ ಯೋಜನೆ ಗ್ಯಾರಂಟಿ ಜಾರಿಗೂ ಮುನ್ನ ಹಾಗೂ ತಾತ್ವಿಕ ಒಪ್ಪಿಗೆಯನ್ನು ಸಚಿವ ಸಂಪುಟ ಸಭೆಯಲ್ಲಿ ನೀಡಿದ ನಂತ್ರ, ಜೂನ್ 2ರಂದು ನಡೆದಿದ್ದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೂಡ ನೀಡಲಾಗಿತ್ತು.

ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಮನೆ ಮಾಲೀಕರು ಸೇರಿದಂತೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದರು. ಪ್ರಯೋಜನವನ್ನು ಪಡೆಯಲು ಬಯಸುವ ಗ್ರಾಹಕರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. 2022-2023ರ ಹಣಕಾಸು ವರ್ಷದಲ್ಲಿ 12 ತಿಂಗಳ ಸರಾಸರಿ ಬಳಕೆ ಮತ್ತು ಶೇಕಡಾ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ 200 ಯೂನಿಟ್ಗಳನ್ನು ಮೀರದಿದ್ದರೆ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ. 200 ಯೂನಿಟ್ ದಾಟಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!