Thursday, June 25, 2026
Homeತಾಜಾ ಸುದ್ದಿಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದ ಟೆನ್ನಿಸ್‌ ಕೃಷ್ಣ

ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾದ ಟೆನ್ನಿಸ್‌ ಕೃಷ್ಣ

- Advertisement -
- Advertisement -

ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣರವರು ಆಮ್‌ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್‌ ಕೃಷ್ಣ, “ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್‌ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್‌ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು” ಎಂದು ಹೇಳಿದರು.

- Advertisement -

Latest News

error: Content is protected !!