Wednesday, May 15, 2024
Homeಕರಾವಳಿಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿಯ ವಿದ್ಯಾರ್ಥಿನಿ...! ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು...!

ಉಪ್ಪಿನಂಗಡಿ: ಹೆಣ್ಣು ಮಗುವಿಗೆ ಜನ್ಮ ನೀಡಿದ ಹತ್ತನೇ ತರಗತಿಯ ವಿದ್ಯಾರ್ಥಿನಿ…! ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು…!

spot_img
- Advertisement -
- Advertisement -

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.

ಈ ಬಗ್ಗೆ, ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಹಿರಬಂಡಾಡಿ ಗ್ರಾಮದ ಮತ್ತಿಮಾರು ಮನೆ ನಿವಾಸಿ ಕೇಶವ (34) ಎಂಬಾತ ಅತ್ಯಾಚಾರವೆಸಗಿರುವುದನ್ನು ಎಂದು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!