Friday, June 2, 2023
Homeತಾಜಾ ಸುದ್ದಿಗಡಿಯಲ್ಲಿ ಉಗ್ರರ ಅಟ್ಟಹಾಸ : ಮೇಜರ್‌, ಪೊಲೀಸ್‌ ಅಧಿಕಾರಿ ಸೇರಿ ಐವರು ಹುತಾತ್ಮ

ಗಡಿಯಲ್ಲಿ ಉಗ್ರರ ಅಟ್ಟಹಾಸ : ಮೇಜರ್‌, ಪೊಲೀಸ್‌ ಅಧಿಕಾರಿ ಸೇರಿ ಐವರು ಹುತಾತ್ಮ

- Advertisement -
- Advertisement -

ಶ್ರೀನಗರ : ಕಾಶ್ಮೀರದ ಗಡಿಯಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಜಮ್ಮುಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಹಂದ್ವಾರದಲ್ಲಿ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕರ್ನಲ್ ಅಶುತೋಷ್ ಶರ್ಮಾ, ಮೇಜರ್ ಅಂಜು, ಓರ್ವ ಲ್ಯಾನ್ಸ್ ನಾಯ್ಕ್, ರೈಫಲ್ ಮ್ಯಾನ್ ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದಾರೆ.

ಕುಪ್ವಾರಾ ಜಿಲ್ಲೆಯ ಹಂದ್ವಾರದ ಚಂಜ್ ಮುಲ್ಲಾ ಪ್ರದೇಶದಲ್ಲಿ ಶನಿವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅಲ್ಲಿನ ನಾಗರಿಕರ ರಕ್ಷಣೆಗೆ ಮುಂದಾಗಿತ್ತು. ಆದರೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡ ಐವರು ಭದ್ರತಾ ಸಿಬ್ಬಂದಿ ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!