Saturday, June 29, 2024
Homeಅಪರಾಧಜಮ್ಮುಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯಾತ್ರಾರ್ಥಿಗಳಿದ್ದ ಬಸ್​ ಮೇಲೆ ಉಗ್ರರ ದಾಳಿ! 10 ಮಂದಿ ಸಾವು

ಜಮ್ಮುಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯಾತ್ರಾರ್ಥಿಗಳಿದ್ದ ಬಸ್​ ಮೇಲೆ ಉಗ್ರರ ದಾಳಿ! 10 ಮಂದಿ ಸಾವು

spot_img
- Advertisement -
- Advertisement -

ನವದೆಹಲಿ: ಜಮ್ಮುಕಾಶ್ಮೀರದ ರಿಯಾಸಿಯಲ್ಲಿ ಭಯೋತ್ಪಾದಕರು ಶಿವಖೋರಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳ ಬಸ್ ಮೇಲೆ ಭಾನುವಾರ ದಾಳಿ ನಡೆಸಿದ್ದಾರೆ.

ಶಿವಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಪೋನಿ ಪ್ರದೇಶದ ತೆರಯತ್ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಘಟನೆಯ ವಿವರ: ಭಯೋತ್ಪಾದಕರು ಬಸ್ ಶಿವಖೋರಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ್ದಾರೆ. ಇನ್ನು ಮೂಲಗಳ ಪ್ರಕಾರ, ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಅದೇ ಭಯೋತ್ಪಾದಕರ ಗುಂಪು ಈ ದಾಳಿ ನಡೆಸಿದೆ ಎಂದು ತಿಳಿಸಿದೆ.

ಇನ್ನು ಪೊಲೀಸ್ ತಂಡಗಳು ಈ ದಾಳಿಯ ಮಾಹಿತಿ ಪಡೆದ್ದು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!