Tuesday, May 14, 2024
Homeತಾಜಾ ಸುದ್ದಿಪಠ್ಯಪುಸ್ತಕ ಪರಿಷ್ಕರಣೆ ವಿವಾದ ಹಿನ್ನೆಲೆ: ರೋಹಿತ್ ಚಕ್ರತೀರ್ಥ‌ ಅಧ್ಯಕ್ಷತೆಯ ಪರಿಷ್ಕರಣಾ ಸಮಿತಿ‌ ವಿಸರ್ಜನೆ

ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಹಿನ್ನೆಲೆ: ರೋಹಿತ್ ಚಕ್ರತೀರ್ಥ‌ ಅಧ್ಯಕ್ಷತೆಯ ಪರಿಷ್ಕರಣಾ ಸಮಿತಿ‌ ವಿಸರ್ಜನೆ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಎದ್ದಿದ್ದ ವಿವಾದಕ್ಕೆ ಅಂತ್ಯ ಹಾಡುವ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕಾರ್ಯ‌ ಮುಗಿದಿರುವುದರಿಂದ ರಾಜ್ಯ ಸರ್ಕಾರ ವಿಸರ್ಜಿಸಿದೆ.

ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಸಿಎಂ ಅಧಿಕೃತ ನಿವಾಸದಲ್ಲಿ ಶಿಕ್ಷಣ ಸಚಿವ‌ ಬಿ.ಸಿ. ನಾಗೇಶ್ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಕುರಿತಂತೆ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ ಬಳಿಕ‌ ಸಮಿತಿಯನ್ನು ರಾಜ್ಯ ಸರ್ಕಾರ ವಿಸರ್ಜಿಸಿದೆ.

ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವುದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದ್ದು, ಈ ಹಿನ್ನಲೆಯಲ್ಲಿ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.

ಇದೇ ವೇಳೆ ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಬಗ್ಗೆ ಇದರ ಮೂಲ ಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.

ಇದೇ ವೇಳೆ ಪ್ರೊ. ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 ಕ್ಕೇರಿಸಿರುವುದಾಗಿ ಸರ್ಕಾರ ಹೇಳಿದೆ.

ಇದರ ಜೊತೆಗೆ ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.

- Advertisement -
spot_img

Latest News

error: Content is protected !!