Sunday, June 7, 2026
HomeUncategorized10ನೇ ತರಗತಿ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಗದ್ಯ ಕೈ ಬಿಟ್ಟಿಲ್ಲ: ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ...

10ನೇ ತರಗತಿ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಗದ್ಯ ಕೈ ಬಿಟ್ಟಿಲ್ಲ: ಕರ್ನಾಟಕ ಪಠ್ಯ ಪುಸ್ತಕ ಸಂಘದಿಂದ ಸ್ಪಷ್ಟೀಕರಣ

- Advertisement -
- Advertisement -

ಬೆಂಗಳೂರು: ಹತ್ತನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್ ಸಿಂಗ್ ಗದ್ಯವನ್ನು ಕೈಬಿಟ್ಟು ಹೆಡಗೆವಾರ್ ಬಗ್ಗೆ ಗದ್ಯ ಸೇರ್ಪಡೆ ಮಾಡಲಾಗಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪಠ್ಯ ಪುಸ್ತಕ ಸಂಘ ಸ್ಪಷ್ಟೀಕರಣ ನೀಡಿದೆ.

ಹತ್ತನೇ ತರಗತಿ ಕನ್ನಡ ಪಠ್ಯ ಪುಸ್ತಕದಿಂದ ಭಗತ್ ಸಿಂಗ್ ಗದ್ಯ ಕೈ ಬಿಟ್ಟಿಲ್ಲ, ಪರಿಷ್ಕರಿಸಿರುವ ಹತ್ತನೇ ತರಗತಿ ಕನ್ನಡ ಪಠ್ಯ ಪುಸ್ತಕ ಪ್ರಸ್ತುತ ಮುದ್ರಣ ಹಂತದಲ್ಲಿದೆ ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸ್ಪಷ್ಟೀಕರಣ ನೀಡಿದ್ದಾರೆ.

ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಿ ಪರಿಷ್ಕರಿಸಲು ರೋಹಿತ್ ಚಕ್ರತೀರ್ಥ ಆಧ್ಯಕ್ಷತೆಯ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿತ್ತು.

ಈ ಸಮಿತಿಯು 6 ರಿಂದ 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳು ಮತ್ತು 1 ರಿಂದ 10ನೇ ತರಗತಿ ಕನ್ನಡ ಭಾಷಾ ಪಠ್ಯ ಪುಸ್ತಕಗಳನ್ನು ಪರಿಷ್ಕರಿಸಿದೆ.

ಹತ್ತನೇ ತರಗತಿ ಪಠ್ಯ ಪುಸ್ತಕದಲ್ಲಿ ಹೆಡಗೆವಾರ್ ಅವರ ಕುರಿತ ಗದ್ಯ ಸೇರಿಸಲಾಗಿದೆ ಎಂದು ವಿಪಕ್ಷಗಳಿಂದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿತ್ತು.

- Advertisement -

Latest News

error: Content is protected !!