Monday, June 8, 2026
Homeತಾಜಾ ಸುದ್ದಿ2021ರ ಫೆಬ್ರವರಿಯಲ್ಲಿ ನಡೆಯಲಿದೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-

2021ರ ಫೆಬ್ರವರಿಯಲ್ಲಿ ನಡೆಯಲಿದೆ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-

- Advertisement -
- Advertisement -

ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತು ಈಬಾರಿ ನಡೆಯಲಿರುವ ಎಂಭತ್ತಾರನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2021ರ ಫೆಬ್ರವರಿಯಲ್ಲಿ ಆಯೋಜಿಸಲು ನಿರ್ಧರಿಸಿದೆ.ಹಾವೇರಿಯಲ್ಲಿ ಈಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವು 2021ರ ಫೆಬ್ರವರಿ 26,27 ಹಾಗೂ 28ರಂದು ನಡೆಸಲು ತೀರ್ಮಾನಿಸಲಾಗಿದೆ. ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದೆ.

ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರು ಭಾಗವಹಿಸಿದ್ದರು. ಕರೊನಾ ಸೋಂಕು ಹಿನ್ನೆಲೆಯಲ್ಲಿ ಮಾರ್ಗಸೂಚಿ ಗಳಿಗನುಗುಣವಾಗಿ ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

- Advertisement -

Latest News

error: Content is protected !!