Saturday, May 18, 2024
Homeಕರಾವಳಿಫಾಜಿಲ್ ಹತ್ಯೆಯ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿ ಆರಾಮಾಗಿದ್ದಾರೆ: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ...

ಫಾಜಿಲ್ ಹತ್ಯೆಯ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿ ಆರಾಮಾಗಿದ್ದಾರೆ: ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಎನ್.ಕೆ.ಎಂ. ಶಾಫಿ ಸಹದಿ ಆರೋಪ

spot_img
- Advertisement -
- Advertisement -

ಮಂಗಳೂರು: ಫಾಜಿಲ್ ಹತ್ಯೆಯ ಆರೋಪಿಗಳಪ ಪೊಲೀಸ್ ಕಸ್ಟಡಿಯಲ್ಲಿ ಆರಾಮಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಹಾಗೂ ಹಾಗೂ ರಾಜ್ಯ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನ ಎನ್.ಕೆ.ಎಂ. ಶಾಫಿ ಸಹದಿ ಆರೋಪ ಮಾಡಿದ್ದಾರೆ.

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಂಗಳಪೇಟೆಯ ಫಾಜಿಲ್ ಮನೆಗೆ ಭಾನುವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಅವರು ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆರಾಮವಾಗಿ ದಿನಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಕುಟುಂಬಸ್ಥರು ಮತ್ತು ಸ್ಥಳೀಯರೊಂದಿಗೆ ಮಾತನಾಡಿದ ಅವರು, ಮನೆಯವರ ಮತ್ತು ಸ್ಥಳೀಯರ ಆರೋಪಗಳನ್ನು ಸಂಬಂಧಪಟ್ಟ ಪೊಲೀಸ್ ಇಲಾಖೆ ಜಿಲ್ಲಾಡಳಿತ ಮತ್ತು ಸರಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜನಪ್ರತಿನಿಧಿಗಳು ಯಾವುದೇ ಜಾತಿ ಧರ್ಮ ಸಂಘ-ಸಂಸ್ಥೆಗಳ ಪ್ರತಿನಿಧಿಗಳೆಲ್ಲ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕು ಎಂದು ಹೇಳಿದರು. ಘಟನೆ ನಡೆದ ಅದೇ ದಿನ ಕಾನೂನು ಸಚಿವರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಕಾನೂನು ಪ್ರಕ್ರಿಯೆಗಳನ್ನು ನಿಷ್ಪಕ್ಷಪಾತವಾಗಿ ನಡೆಸುವಂತೆ ಮಾತನಾಡಿದ್ದೇನೆ. ಅಲ್ಲದೆ, ಸರಕಾರ ಸೂಕ್ತ ಪರಿಹಾರ ನೀಡುವಂತೆ ಮುಖ್ಯಮಂತ್ರಿಯ ಜೊತೆ ಚರ್ಚಿಸಲಾಗಿದೆ ಎಂದರು.

ಕರಾವಳಿಯಲ್ಲಿ ಚುನಾವಣೆ ಬರುವಾಗ ಅಮಾಯಕರ ಕಗ್ಗೊಲೆಗಳ ಆಗುತ್ತಿದೆ ಇದರ ಹಿಂದೆ ದೊಡ್ಡ ಪ್ರಮಾಣದ ರಾಜಕೀಯ ಇದೆ ಇದನ್ನು ಮಟ್ಟಹಾಕಲು ಸರಕಾರದ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಇದೇ ಸಂದರ್ಭ ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಎರಡು ಲಕ್ಷ ರೂಪಾಯಿಗಳ ಚೆಕ್ ನ್ನು ಶಾಫಿ ಸಅದಿ ಅವರು ಫಾಝಿಲ್‌ ಕುಟುಂಬಕ್ಕೆ ಹಸ್ತಾಂತರಿಸಿದರು.

- Advertisement -
spot_img

Latest News

error: Content is protected !!