Thursday, June 4, 2026
Homeತಾಜಾ ಸುದ್ದಿರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯ; ಇಂದು ಜಡ್ಜ್ ಮುಂದೆ...

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯ; ಇಂದು ಜಡ್ಜ್ ಮುಂದೆ ವಿಚಾರಣೆಗೆ ಹಾಜರುಪಡಿಸಲಿರುವ ಜೈಲಾಧಿಕಾರಿಗಳು

- Advertisement -
- Advertisement -

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿದ್ದು, ಇಂದು ಜೈಲಾಧಿಕಾರಿಗಳು ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಜಡ್ಜ್ ಮುಂದೆ ವಿಚಾರಣೆಗೆ ಹಾಜರುಪಡಿಸಲಿದ್ದಾರೆ.

ಇಂದು ಮಧ್ಯಾಹ್ನದ ನಂತರ ವಿಚಾರಣೆಗೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಸಾಧ್ಯತೆ ಎನ್ನಲಾಗುತ್ತಿದೆ.

ಇಂದು ತುಮುಕೂರು ಜೈಲಿನಲ್ಲಿರುವ ನಾಲ್ವರು ಆರೋಪಿಗಳು ಹಾಗೂ ಪರಪ್ಪನ ಅಗ್ರಹಾರದಲ್ಲಿರುವ 13 ಆರೋಪಿಗಳನ್ನು ಏಕಕಾಲದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಜೈಲಾಧಿಕಾರಿಗಳು ಜಡ್ಜ್ ಮುಂದೆ ಹಾಜರುಪಡಿಸಲಿದ್ದಾರೆ.ಕಳೆದ ಬಾರಿ ಅಂದರೆ ಜುಲೈ 4 ರಂದು ಇದೇ ರೀತಿ ಹಾಜರುಪಡಿಸಲಾಗಿತ್ತು.

- Advertisement -

Latest News

error: Content is protected !!