Saturday, June 6, 2026
Homeಕರಾವಳಿಬಂಟ್ವಾಳ: ಜೈಲಿಗೆ ಕರೆದೊಯ್ಯುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ: ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ: ಜೈಲಿಗೆ ಕರೆದೊಯ್ಯುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ: ಸಾರ್ವಜನಿಕರ ಸಹಾಯದಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ಚಾಳ: ಜೈಲಿಗೆ ಹೋಗುತ್ತಿದ್ದ ವೇಳೆ ಕಳ್ಳತನ ಪ್ರಕರಣದ ಆರೋಪಿ ಪೊಲೀಸರನ್ನು ತಳ್ಳಿ ಬಸ್ ನಿಂದ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ ಘಟನೆ ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ನಿನ್ನೆ ಸಂಜೆ ಸಂಭವಿಸಿದೆ.

ಕಳ್ಳಿಗೆ ಗ್ರಾಮದ ನಿವಾಸಿ ಗಿರೀಶ್ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ. ಈತ 2003 ರಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯದ ಆದೇಶದಂತೆ ಪೊಲೀಸರು ಈತನನ್ನು ಪತ್ತೆ ಹಚ್ಚಿ ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈತನಿಗೆ ಶಿಕ್ಷೆ ಪ್ರಕಟಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯುವಾಗ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಸಾರ್ವಜನಿಕರ ಸಹಾಯದಿಂದ ಪೊಲೀಸರು ಈತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

- Advertisement -

Latest News

error: Content is protected !!