Wednesday, June 24, 2026
Homeತಾಜಾ ಸುದ್ದಿಬಂಟ್ವಾಳ: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು

ಬಂಟ್ವಾಳ: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿಗೆ ಜಾಮೀನು ಮಂಜೂರು

- Advertisement -
- Advertisement -

ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಾಸ್ಥಾನದ ಬಳಿ ಅಕ್ರಮ ಗೋಸಾಗಾಟ ಪ್ರಕರಣದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಅಕ್ರಮ ಗೋ ಸಾಗಾಟ ವಾಹನವನ್ನು ತಡೆದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿ ವಾಹನ, ಗೋವನ್ನು  ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು‌. ಕಾರ್ಯಾಚರಣೆ ವೇಳೆ ಪುಂಜಾಲಕಟ್ಟೆ ಪೊಲೀಸರು ಕೃತ್ಯಕ್ಕೆ ಬಳಸಿದ ಮಹೇಂದ್ರ ಜೀತೋ ವಾಹನ ಮತ್ತು  ಗೋವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದರು.

ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2022 ಕಲಂ 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 & ಕಲಂ 11(1)(ಡಿ) ಪ್ರಾಣಿ ಹಿಂಸೆ ತಡೆ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ ಕಾಯ್ದೆ 1960 & ಕಲಂ 66 ಐ ಎಂ ವಿ ಕಾಯ್ದೆಯಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಯ ಪರವಾಗಿ ನ್ಯಾಯವಾದಿಗಳಾದ ಜುಬೇದಾ ಸರಳಿಕಟ್ಟೆ, ಮುಂಝೀರ್ ತುಂಬೆ, ಸಿರಾಜುದ್ದೀನ್ ಜೋಗಿಬೊಟ್ಟು ವಾದಿಸಿದ್ದರು.

- Advertisement -

Latest News

error: Content is protected !!