Saturday, June 6, 2026
Homeಅಪರಾಧಮಂಗಳೂರು: ಸರಣಿ ಅಪಘಾತ ಪ್ರಕರಣ- ಆರೋಪಿ ಎ.12ರವರೆಗೆ ಪೊಲೀಸ್ ಕಸ್ಟಡಿಗೆ

ಮಂಗಳೂರು: ಸರಣಿ ಅಪಘಾತ ಪ್ರಕರಣ- ಆರೋಪಿ ಎ.12ರವರೆಗೆ ಪೊಲೀಸ್ ಕಸ್ಟಡಿಗೆ

- Advertisement -
- Advertisement -

ಮಂಗಳೂರು: ಬಲ್ಲಾಳ್‌ಬಾಗ್‌ನಲ್ಲಿ ಶನಿವಾರ ನಡೆದ ಸರಣಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಎಂಡಬ್ಲ್ಯು ಕಾರಿನ ಚಾಲಕ ಶ್ರವಣ್ ಕುಮಾರ್‌ನನ್ನು ಸಂಚಾರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಎ.12ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

ಸಂಚಾರ ದಟ್ಟಣೆಯಿಂದ ಕೂಡಿದ ಪ್ರಮುಖ ರಸ್ತೆಯಲ್ಲಿ ಅತೀ ವೇಗವಾಗಿ ಮತ್ತು ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 308, 279, 337, 338ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಗಂಭೀರವಾದ ನಿರ್ಲಕ್ಷ್ಯ ಆರೋಪಿಯು ತೋರಿಸಿರುವುದರಿಂದ ಕಾನೂನು ತಜ್ಞರ ಸಲಹೆ ಪಡೆದು ಆರೋಪಿ ವಿರುದ್ಧ ಅಪರೂಪವೆಂಬಂತೆ ಕಲಂ 308ರ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಮದ್ಯ ಅಥವಾ ಡ್ರಗ್ಸ್ ಸೇವನೆ ಮಾಡಿದ್ದಾನೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲು ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ

ಶ್ರವಣ್ ಕುಮಾರ್ ಚಲಾಯಿಸುತ್ತಿದ್ದ ಬಿಎಂಡಬ್ಲು ಕಾರಿನ ದಾಖಲೆಗಳು ಸಮರ್ಪಕವಾಗಿರಲಿಲ್ಲ ಎಂದು ತಿಳಿದು ಬಂದಿದ್ದು, ದಾಖಲೆಯ ಬಗ್ಗೆ ಕೆಲವು ಗೊಂದಲಗಳಿವೆ. ಈ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಕರಂಗಲ್ಪಾಡಿಯ ಪ್ರೀತಿ ಮನೋಜ್(47)ರ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!