- Advertisement -


- Advertisement -
ಮಣಿಪಾಲ: ಇಲ್ಲಿನ ಈಶ್ವರ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ನಿರ್ಲಕ್ಷ್ಯದಿಂದ ಕಾರು ಚಲಾಯಿಸಿ ಅಪಘಾತಕ್ಕೆ ಕಾರಣನಾಗಿದ್ದ ಕಾರ್ಕಳ ಮೂಲದ ಆರೋಪಿ ಸಮೇಗ್ಸ್ ಎಲ್.ಜಿ (25) ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಜೂನ್ 19ರ ರಾತ್ರಿ ಆರೋಪಿ ಚಲಾಯಿಸುತ್ತಿದ್ದ ಕಾರು ಅಲೆವೂರು ನಿವಾಸಿ ಅಭಿಷೇಕ್ ನಾಯಕ್ (21) ಅವರ ಸ್ಕೂಟಿಗೆ ಮುಖಾಮುಖಿ ಢಿಕ್ಕಿ ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಸ್ಕೂಟಿ ಸವಾರ ಅಭಿಷೇಕ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು.
ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜೂನ್ 22 ರಂದು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ.
- Advertisement -


