- Advertisement -
![]()
- Advertisement -
ಸುಳ್ಯ: ತನ್ನ ಅತ್ತಿಗೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ ತನ್ನ ಅತ್ತಿಗೆ ಜಯಭಾರತಿ ಅನ್ನೋರಿಗೆ ಆರೋಪಿ ಶಂಕರ್ ನಾಯಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಂಕರ ನಾಯಕ್ ಎಂಬಾತನನ್ನು ಬೆಳ್ಳಾರೆ ಪೊಲೀಸರು ಆಸ್ಪತ್ರೆಯಿಂದ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಬೆಂಕಿ ಹಚ್ಚಿದ್ದ ವೇಳೆ ಬೆಂಕಿ ವ್ಯಾಪಿಸಿ ಶಂಕರ ನಾಯಕ್ ನಿಗೂ ಗಾಯವಾಗಿತ್ತು. ಹಾಗಾಗಿ ಆತ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಬುಧವಾರ ಆತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಈ ವೇಳೆ ಆತನನ್ನು ಕಸ್ಟಡಿಗೆ ಪಡೆದ ಬೆಳ್ಳಾರೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯಿಂದ ಗಂಭೀರ ಗಾಯಗೊಂಡಿರುವ ಜಯಭಾರತಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -


