Wednesday, June 24, 2026
Homeಅಪರಾಧಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಪ್ರಕರಣ; 5 ಕೋಟಿ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಪ್ರಕರಣ; 5 ಕೋಟಿ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯ ಎಂದು ಹೇಳಿಕೊಂಡು ಬೆದರಿಕೆ ಹಾಕಿ 5 ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಅ.23 ಬುಧವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಜಾರ್ಖಂಡ್‌ನ ಜೆಮ್‌ಶೆಡ್‌ಪುರದ ತರಕಾರಿ ವ್ಯಾಪಾರೀ ಶೇಖ್ ಹುಸೇನ್ ಶೇಖ್ ಮೌಸಿನ್ (24) ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ: ಈತ ಕಳೆದ ಅಕ್ಟೋಬರ್ 18 ರಂದು ನಗರದ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ವಾಟ್ಸ್ ಆಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದು, ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ ಅವರು 5 ಕೋಟಿ ಪಾವತಿಸಬೇಕು. ಒಂದು ವೇಳೆ ಹಣ ನೀಡದಿದ್ದರೆ ಸಲ್ಮಾನ್ ಖಾನ್ ಸ್ಥಿತಿ ಬಾಬಾ ಸಿದ್ದಿಕ್ ಗಿಂತ ಕೆಟ್ಟದಾಗುತ್ತದೆ,’’ ಎಂದು ಸಂದೇಶ ಕಳುಹಿಸಿದ್ದ ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂಬೈ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದರು.

ಆರೋಪಿಯ ಪತ್ತೆಗೆ ಬಲೆ ಬೀಸಿದ್ದ ಪೊಲೀಸರಿಗೆ ಕಾರ್ಯಾಚರಣೆ ವೇಳೆ ಆರೋಪಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿರುವುದು ಗೊತ್ತಾಗಿದೆ ಅದರಂತೆ ಅಲ್ಲಿನ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ಬುಧವಾರ ಬಂಧಿಸಿದ್ದು ಗುರುವಾರ ಮುಂಬೈಗೆ ಕರೆತರಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!