Monday, June 8, 2026
Homeಅಪರಾಧವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಬಂಟ್ವಾಳ: ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ ನಿವಾಸಿಯೊಬ್ಬ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿ ಬಂಟ್ವಾಳದ ಪುದು ನಿವಾಸಿ ಮಹಮ್ಮದ್ ಜಯುದ್ದೀನ್. ಈತನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಶಾಂತಿಭಂಗ ಉಂಟು ಮಾಡುತ್ತಿದ್ದ ಕಾರಣಕ್ಕಾಗಿ ಪ್ರಕರಣ ದಾಖಲಾಗಿತ್ತು.

ಆದರೆ ಆತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಉಪನಿರೀಕ್ಷರುಗಳಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ರಾಧಕೃಷ್ಣ ಪುನೀತ್ ಮತ್ತು ನಾಗನಾಥ್ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!