Monday, June 8, 2026
Homeಅಪರಾಧಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಮಂಗಳೂರು: ಎಂಟು ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ತೊಕ್ಕೊಟ್ಟು ಕಾಪಿಕಾಡು ನಿವಾಸಿ ಸಂತೋಷ.

ಧರ್ಮಸ್ಥಳ ಪೊಲೀಸರು ಆರೋಪಿ ಸಂತೋಷನನ್ನು ಬಂಧಿಸಿ ಮಂಗಳೂರಿನ 5ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಬಳಿಕ ಜಾಮೀನಿನ ಮೇರೆಗೆ ಬಿಡುಗಡೆಗೊಳಿಸಲಾಗಿದೆ. ಆರೋಪಿ ಬೆಳ್ತಂಗಡಿಯ ಛಿಬಿದ್ರೆಗೆ ಬಂದಿರುವ ಮಾಹಿತಿ ಮೇರೆಗೆ ಆತನನ್ನು ಛಿಬಿದ್ರೆ ಬಸ್ ನಿಲ್ದಾಣದ ಹತ್ತಿರ ಬಂಧಿಸಲಾಗಿತ್ತು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!