Saturday, October 17, 2026
Homeಕರಾವಳಿಮಂಜೇಶ್ವರ: ಆಂಧ್ರಪ್ರದೇಶದಿಂದ ಕೇರಳಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..

ಮಂಜೇಶ್ವರ: ಆಂಧ್ರಪ್ರದೇಶದಿಂದ ಕೇರಳಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..

- Advertisement -
- Advertisement -

ಮಂಜೇಶ್ವರ: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಚಟ್ಟಂಗುಯಿಯ ಮುಹಮ್ಮದ್ ಅಜ್ಮಲ್ (23) ಎಂದು ಗುರುತಿಸಲಾಗಿದೆ.

ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗಳು ತಲಪಾಡಿಯಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ 114 ಕಿಲೋ ಗಾಂಜಾ ಪತ್ತೆಯಾಗಿದೆ.

ಕಾರಿನ ಡಿಕ್ಕಿಯಲ್ಲಿ 54 ಪ್ಯಾಕೆಟ್ ಗಳಲ್ಲಿ ಗಾಂಜಾವನ್ನು ತುಂಬಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದಿಂದ ಗಾಂಜಾವನ್ನು ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದುದಾಗಿ ಬಂಧಿತ ತಪ್ಪೊಪ್ಪಿಕೊಂಡಿದ್ದಾನೆ.

- Advertisement -

Latest News

error: Content is protected !!