Monday, June 8, 2026
Homeಕರಾವಳಿಪುತ್ತೂರು: ಒಂದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಒಂದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ಒಂದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಪಾಟ್ರಕೋಡಿ ಎಂಬಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ

ಪಾಟ್ರಕೋಡಿಯಲ್ಲಿ ಗಾಂಜಾ ಪ್ರಕರಣವೊಂದನ್ನು ವರ್ಷಗಳ ಹಿಂದೆ ಪತ್ತೆ ಹಚ್ಚಿದ್ದ ಪೊಲೀಸರು ಅರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪೈಕಿ 2ನೇ ಆರೋಪಿಯಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಎಂಬಾತ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿ ಮೇಲೆ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ಪೊಲೀಸರು ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ, ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರ ನಿರ್ದೇಶನದಂತೆ ಪುತ್ತೂರು ನಗರ ಪೊಲೀಸ್ ಠಾಣೆ ಇನ್‍ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಎಸ್.ಐ ಶ್ರೀಕಾಂತ್ ರಾಥೋಡ್ ಅವರ ನೇತೃತ್ವದಲ್ಲಿ ಬಂಧಿಸಿದ್ದಾರೆ.

- Advertisement -

Latest News

error: Content is protected !!