Friday, May 17, 2024
Homeಕರಾವಳಿಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ಆರೋಪಿಗೆ ನ್ಯಾಯಾಂಗ ಬಂಧನ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ; ಆರೋಪಿಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಬಂಟ್ವಾಳ: ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿ ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50)

ಈತ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದನು. ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಕುರಿತು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೋಲೀಸರು, ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

- Advertisement -
spot_img

Latest News

error: Content is protected !!