Monday, June 8, 2026
Homeಕರಾವಳಿಮಂಗಳೂರು: ಐದು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಐದು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಮತ್ತು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಕ್ಕೆಪಡ್ಪು ನಿವಾಸಿ ಮೊಹಮ್ಮದ್ ಅಝರುದ್ದಿನ್ ಯಾನೆ ಅಝರ್(30) ಎಂಬಾತನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2015ರಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೊಹಮ್ಮದ್ ಅಝರುದ್ದಿನ್ ಆರೋಪಿಯಾಗಿದ್ದನು. ವಿದೇಶದಲ್ಲಿದ್ದ ಈತನ ಬಂಧನಕ್ಕೆ ಎಲ್‌ಒಸಿ ಹೊರಡಿಸಲಾಗಿತ್ತು. ಮೇ 27ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗವು ವಶಕ್ಕೆ ಪಡೆದು ಮಂಗಳೂರು ಗ್ರಾಮಾಂತರ ಪೊಲೀಸರು ವಶಕ್ಕೆ ನೀಡಿತ್ತು. ಆರೋಪಿಯನ್ನು ಬಂಧಿಸಿರುವ ಮಂಗಳೂರು ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿ ಅಝರುದ್ದಿನ್‌ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!