Monday, June 17, 2024
Homeತಾಜಾ ಸುದ್ದಿದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆ ದಾಳಿ ಖಂಡನೀಯ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಹೇಳಿಕೆ

ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆ ದಾಳಿ ಖಂಡನೀಯ; ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಹೇಳಿಕೆ

spot_img
- Advertisement -
- Advertisement -

ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆ ದಾಳಿ ಖಂಡನೀಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ  ರಕ್ಷಿತ್ ಶಿವರಾಂ ಹೇಳಿಕೆ ನೀಡಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿ ವ್ಯಕ್ತಿ  ಮೃತಪಟ್ಟಿದ್ದಾರೆ ಎಂದು ಉದ್ರಿಕ್ತಗೊಂಡ  ಸಂಬಂಧಿಕರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಿ ಠಾಣೆಯೊಳಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಪೊಲೀಸ್ ವಾಹನಗಳನ್ನೂ ಹಾನಿ ಮಾಡಿರುವ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಸರ್ಕಾರ  ಸೂಕ್ತ  ಕ್ರಮಕೈಗೊಳ್ಳಬೇಕು.ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ವರದಿ ಬಳಿಕ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ಜರುಗಿಸುತ್ತೇವೆ ಎಂದು ಈಗಾಗಲೇ ಗೃಹ ಸಚಿವರು ತಿಳಿಸಿದ್ದಾರೆ ಎಂದಿದ್ದಾರೆ. ಪ್ರತಿಭಟನೆ ನೆಪದಲ್ಲಿ  ಪೊಲೀಸ್ ಠಾಣೆಗೆ ನುಗ್ಗುವ ಪ್ರಯತ್ನ,ಪೋಲಿಸರ ಮೇಲೆ   ಇಂತಹ ಘಟನೆ ಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!