Thursday, June 4, 2026
Homeತಾಜಾ ಸುದ್ದಿಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ: ಸ್ವಾತಂತ್ರ್ಯ ದಿನಾಚರಣೆಗೆ ಜನ ಸೇರುವುದನ್ನು ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆ: ಸ್ವಾತಂತ್ರ್ಯ ದಿನಾಚರಣೆಗೆ ಜನ ಸೇರುವುದನ್ನು ತಪ್ಪಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

- Advertisement -
- Advertisement -

ನವದೆಹಲಿ: ದೇಶವು ಪ್ರತಿದಿನ ಸರಾಸರಿ 15,000 ಕ್ಕೂ ಹೆಚ್ಚು ಕೊರೋನಾ ವೈರಸ್ ಪ್ರಕರಣಗಳನ್ನು ದಾಖಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯಂದು ದೊಡ್ಡದಾಗಿ ಸಭೆ ಸೇರುವಂತಿಲ್ಲ ಮತ್ತು ಪ್ರತಿಯೊಬ್ಬರೂ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕು ಎಂದು ಕೇಂದ್ರವು ರಾಜ್ಯಗಳಿಗೆ ಹೇಳಿದೆ.

ಕೋವಿಡ್-19 ವಿರುದ್ಧ ಮುನ್ನೆಚ್ಚರಿಕೆಯಾಗಿ, ಸಮಾರಂಭದಲ್ಲಿ ದೊಡ್ಡ ಪ್ರಮಾಣದಲ್ಲಿ ಯಾರೂ ಸೇರುವಂತಿಲ್ಲ. ಕೇಂದ್ರ ಮತ್ತು ರಾಜ್ಯಗಳು ಮಾಡಿರುವ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಾಗಿದೆ. ಭಾರತದಲ್ಲಿ 16,561 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು. ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು 4,42,23,557 ಕ್ಕೆ ತಲುಪಿದೆ, ಆದರೆ ಸಕ್ರಿಯ ಪ್ರಕರಣಗಳು 1,23,535 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯು ಶುಕ್ರವಾರ ತಿಳಿಸಿದೆ.

- Advertisement -

Latest News

error: Content is protected !!