Saturday, May 18, 2024
Homeಕರಾವಳಿಮಂಗಳೂರು: ಕೇಸರಿ ಶಾಲು-ಹಿಜಾಬ್ ವಿವಾದ..! ಮಾರ್ಚ್ 5ರವರೆಗೆ ಶಾಲಾ-ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ವಿಸ್ತರಿಸಿದ ದ.ಕ. ಜಿಲ್ಲಾಧಿಕಾರಿ

ಮಂಗಳೂರು: ಕೇಸರಿ ಶಾಲು-ಹಿಜಾಬ್ ವಿವಾದ..! ಮಾರ್ಚ್ 5ರವರೆಗೆ ಶಾಲಾ-ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ ವಿಸ್ತರಿಸಿದ ದ.ಕ. ಜಿಲ್ಲಾಧಿಕಾರಿ

spot_img
- Advertisement -
- Advertisement -

ಮಂಗಳೂರು: ಕೇಸರಿ ಶಾಲು- ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ನಿಷೇಧಾಜ್ಞೆಯನ್ನು ಮಾರ್ಚ್ 5ರವರೆಗೆ ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ವಿಧಿಸಿದ್ದ ನಿಷೇಧಾಜ್ಞೆಯ ಅವಧಿ ಫೆ.26 ಶುಕ್ರವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ದ.ಕ. ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ಫೆ.28ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಹಿಂದೆ ಫೆ.19ರ ಸಂಜೆ 6ರಿಂದ ಫೆ.26ರ ಸಂಜೆ 6ರವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಆದರೆ ಹಿಜಾಬ್-ಕೇಸರಿ ಶಾಲು ವಿವಾದ ಮುಕ್ತಾಯಗೊಳ್ಳದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!