Saturday, June 6, 2026
Homeತಾಜಾ ಸುದ್ದಿಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿದ ಕಿಡಿಗೇಡಿಗಳು..! ಘಟನೆ ವಿರುದ್ಧ ಎಫ್‌ಐಆರ್ ದಾಖಲು

ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿದ ಕಿಡಿಗೇಡಿಗಳು..! ಘಟನೆ ವಿರುದ್ಧ ಎಫ್‌ಐಆರ್ ದಾಖಲು

- Advertisement -
- Advertisement -

ಮಸೀದಿ ಮೇಲೆ ಕಿಡಿಗೇಡಿಗಳು ಕೇಸರಿ ಧ್ವಜ ಹಾರಿಸಿದ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಸತ್ತಿಗೇರಿ ಮಡ್ಡಿ ಮಸೀದಿಯ ಮೇಲೆ ಯಾರೋ ಕಿಡಿಗೇಡಿಗಳು ಕೇಸರಿ ಧ್ವಜ ಹಾರಿಸಿರುವುದು ಬುಧವಾರ ಕಂಡು ಬಂದಿದೆ.

ಇದರಿಂದ ಘಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಮಸೀದಿಯ ಖಾಝಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ತತ್‌ಕ್ಚಣ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಘಟನೆ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಬಳಿಕ ಎರಡೂ ಸಮುದಾಯಗಳ ಮುಖಂಡರನ್ನು ಕರೆದು ಪೊಲೀಸರು ಶಾಂತಿ ಸಭೆ ನಡೆಸಿದರು.

ಬೆಳಗಿನ ಜಾವ 3.30ರಿಂದ 5.30ರ ನಡುವೆ ಧ್ವಜ ಅಳವಡಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!