Thursday, June 25, 2026
Homeತಾಜಾ ಸುದ್ದಿರಾಜ್ಯ ಸರ್ಕಾರದ ಅತಿದೊಡ್ಡ ಹಗರಣ ವಿಧಾನಸಭೆ ಕಲಾಪದಲ್ಲಿ ಬಹಿರಂಗ: ಹೊಸ ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

ರಾಜ್ಯ ಸರ್ಕಾರದ ಅತಿದೊಡ್ಡ ಹಗರಣ ವಿಧಾನಸಭೆ ಕಲಾಪದಲ್ಲಿ ಬಹಿರಂಗ: ಹೊಸ ಬಾಂಬ್‌ ಸಿಡಿಸಿದ ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರು: ರಾಜ್ಯ ಸರ್ಕಾರದ ಅತಿದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಹಿರಂಗಪಡಿಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ.

ವಿಧಾನಸೌಧದ ಜೆಡಿಎಸ್‍ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ಕೊಡಿ ಎಂದು ಹಲವು ಬಾರಿ ಕೆಣಕಿದ್ದಾರೆ. ಸಾವಿರಾರು ಕೋಟಿ ಬೆಲೆಬಾಳುವ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!