Thursday, May 23, 2024
Homeಚಿಕ್ಕಮಗಳೂರುಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಬಸ್; ಓರ್ವ ಮಹಿಳೆ ಮೃತ್ಯು, ಐವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಬಸ್; ಓರ್ವ ಮಹಿಳೆ ಮೃತ್ಯು, ಐವರು ಗಂಭೀರ

spot_img
- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. 

ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಬೆಂಗಳೂರಿನ ಯಲಹಂಕ ನಿವಾಸಿ ಸುರೇಖಾ(45) ಮೃತ ದುರ್ದೈವಿಯಾಗಿದ್ದಾರೆ. 

ಬೆಂಗಳೂರು- ಹಾಸನ-ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿನಿಂದ ಹೊರನಾಡಿಗೆ ಪ್ರವಾಸ ಹೊರಟಿದ್ದ ಈ ಬಸ್ಸಿನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರಿದ್ದರು. ಇಂದು ಬೆಳಗಿನ ಜಾವ 4:45ರ ವೇಳೆ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಚೀಕನಹಳ್ಳಿ – ಕಸ್ಕೆಬೈಲು ಕ್ರಾಸ್ ಬಳಿ ಬಸ್ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಗಾಯಾಳುಗಳನ್ನು ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!