Wednesday, June 3, 2026
Homeತಾಜಾ ಸುದ್ದಿಮೂಡಬಿದಿರೆ: ಪಾದಚಾರಿಗೆ ಕಾರು ಢಿಕ್ಕಿ ಹೊಡೆದು ಪರಾರಿ

ಮೂಡಬಿದಿರೆ: ಪಾದಚಾರಿಗೆ ಕಾರು ಢಿಕ್ಕಿ ಹೊಡೆದು ಪರಾರಿ

- Advertisement -
- Advertisement -

ಮೂಡಬಿದಿರೆ: ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಚಾರಿಯೋರ್ವರು ಹೋಗುತ್ತಿದ್ದಾಗ ರಿಟ್ಸ್ ಕಾರು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಮೃತರನ್ನು ಸಂಪಿಗೆಯ ಇಡ್ಡಬೆಟ್ಟು ನಿವಾಸಿ ಹರೀಶ್(50) ಎಂದು ಗುರುತಿಸಲಾಗಿದೆ.

ಹರೀಶ್ ಅವರು ಎಂದಿನಂತೆ ಸಂಜೆ ವೇಳೆ ಸಂಪಿಗೆಯಿಂದ ಕಲ್ಲಮುಂಡ್ಕೂರು ಪೇಟೆಗೆ ಹೋಗಿದ್ದು ನಂತರ ಹಿಂತಿರುಗಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಿಟ್ಸ್ ಕಾರು ಢಿಕ್ಕಿ ಹೊಡೆದಿದ್ದು ಈ ಸಂದರ್ಭ ನೆಲಕ್ಕೆ ಬಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಢಿಕ್ಕಿ ಹೊಡೆದ ಕಾರು ಪರಾರಿಯಾಗಿದೆ.

ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸುದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!