Thursday, June 4, 2026
Homeತಾಜಾ ಸುದ್ದಿಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣ; ಇಬ್ಬರು ಆರೋಪಿಗಳನ್ನು ವಿಚಾರಣೆ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣ; ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಲು ಪೊಲೀಸರ ಸಿದ್ಧತೆ

- Advertisement -
- Advertisement -

ಬೆಂಗಳೂರು :ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲು ಸಿದ್ಥತೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣದ ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ನನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗಿದೆ. ದರ್ಶನ್ ಗೆ ರಾಜಾತಿಥ್ಯ ನೀಡಿದ ಬಗ್ಗೆ  ಒಟ್ಟು ಮೂರು ಕೇಸ್ ದಾಖಲಾಗಿದ್ದವು. 2 ಕೇಸ್ ನಲ್ಲಿ ವಿಲ್ಸನ್ ಗಾರ್ಡನ್ ನಾಗ ಆರೋಪಿಯಾಗಿದ್ದಾನೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಇದೀಗ ತೀರ್ಮಾನಿಸಿದ್ದಾರೆ.

ಇಬ್ಬರನ್ನು ಬೆಂಗಳೂರಿನ 8ನೇ ACMM ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದುಕೊಳ್ಳಲಿದ್ದಾರೆ.

- Advertisement -

Latest News

error: Content is protected !!