Thursday, June 25, 2026
Homeಕರಾವಳಿಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು; ಖಾಝಿ, ಉಲೆಮಾಗಳ ಆಗ್ರಹ

ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು; ಖಾಝಿ, ಉಲೆಮಾಗಳ ಆಗ್ರಹ

- Advertisement -
- Advertisement -

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆ ಹಲವಾರು ಅನ್ಯಾಯಕಾರಿ ಅಂಶಗಳನ್ನು ಒಳಗೊಂಡಿದ್ದು ಮುಸ್ಲಿಮರನ್ನು ದಮನಿಸುವ ಕೋಮುವಾದಿ ಉದ್ದೇಶ ಹೊಂದಿದೆ, ಕೂಡಲೇ ಈ ಮಸೂದೆಯನ್ನು ಹಿಂಪಡೆಯೇಕು ಎಂದು ಖಾಝಿ, ಉಲೆಮಾಗಳು ಆಗ್ರಹಿಸಿದ್ದಾರೆ.

ಇವರು ಮಂಗಳೂರಿನಲ್ಲಿ ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧೀನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕೇಂದ್ರ ಸರಕಾರದ ತಿದ್ದುಪಡಿ ಮಸೂದೆ ವಕ್ಫ್ ಆಸ್ತಿಗಳನ್ನು ಕಬಳಿಸುವ ಮತ್ತು ಅಳಿದುಳಿದ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲೂ ಸಮುದಾಯದ ನಿಯಂತ್ರಣವನ್ನು ತಪ್ಪಿಸುವ ಉದ್ದೇಶ ಹೊಂದಿದ್ದು, ಇದು ಮುಸ್ಲಿಮರ ಮೇಲಿನ ದಾಳಿಯ ಮುಂದುವರೆದ ಭಾಗವಾಗಿದೆ. ವಕ್ಫ್ ಆಸ್ತಿ ಸರಕಾರ ನೀಡಿದ್ದಲ್ಲ. ಮುಸಲ್ಮಾನ ಶ್ರೀಮಂತರು ಧಾರ್ಮಿಕ ಉದ್ದೇಶಕ್ಕೆ ಮುಸ್ಲಿಂ ಸಮಾಜದ ಸಬಲೀಕರಣಕ್ಕಾಗಿ ನೀಡಿದ ದಾನವಾಗಿದ್ದು, ಇದನ್ನು ಬೇರೆಯವರ ಆಸ್ತಿ ವಕ್ಫ್ ಮಾಡಲು ಸಾಧ್ಯವಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಖಾಝಿ ಅಹ್ಮದ್ ಮುಸ್ಲಿಯಾರ್ ತಾಖಾ ಉಸ್ತಾದ್, ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್, ಯು.ಕೆ. ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು, ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ದ.ಕ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮೊದಲಾದವರು ಭಾಗಿಯಾಗಿದ್ದರು.

- Advertisement -

Latest News

error: Content is protected !!