Wednesday, June 3, 2026
Homeತಾಜಾ ಸುದ್ದಿಬಿಜೆಪಿ ಪಕ್ಷದೊಳಗೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ ಶಾಕಿಂಗ್ ಹೇಳಿಕೆ ನೀಡಿದ ಬಸವರಾಜ...

ಬಿಜೆಪಿ ಪಕ್ಷದೊಳಗೇ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ ಶಾಕಿಂಗ್ ಹೇಳಿಕೆ ನೀಡಿದ ಬಸವರಾಜ ಹೊರಟ್ಟಿ

- Advertisement -
- Advertisement -

ಹುಬ್ಬಳ್ಳಿ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಬಿಜೆಪಿ ಪಕ್ಷ ಮಾಡುತ್ತಿದೆ. ಪಕ್ಷದೊಳಗಿನ ಈ ಲಾಭಿ ಕುರಿತು ಬಿ.ಜೆ.ಪಿ ಹಿರಿಯ ಮುಖಂಡರು ತನಗೆ ಮಾಹಿತಿ ನೀಡಿದ್ದಾರೆ ಎಂದು ಜೆಡಿಎಸ್ ಹಿರಿಯ ನಾಯಕ ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರಕೋಟೆ ರಚಿಸುವಲ್ಲಿ ಯಡಿಯೂರಪ್ಪ ಅವರ ಪಾತ್ರ ಹಿರಿದು. ಪಕ್ಷಕ್ಕಾಗಿ ಸಾಕಷ್ಟು ದುಡಿದಿರುವ ಯಡಿಯೂರಪ್ಪ ಅವರನ್ನು ಹೀಗೆ ನಡೆಸುಕೊಳ್ಳುವುದು ಸಮಂಜಸವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಯಡಿಯೂರಪ್ಪ ಅವರನ್ನು ಭೇಟಿಯಾಗಿರಬಹುದು ಎಂದು ಹೇಳಿದರು.
ಮಾಜಿ ಸಚಿವ ಬಸವರಾಜ ಹೊರಟ್ಟಿಯವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು ಯಡಿಯೂರಪ್ಪ ಗದ್ದುಗೆಯಿಂದ ಇಳಿಯುವರೇ? ಎಂಬ ಪ್ರಶ್ನೆ ಮೂಡಿದೆ.

- Advertisement -

Latest News

error: Content is protected !!