Thursday, June 4, 2026
Homeತಾಜಾ ಸುದ್ದಿಸಚಿವ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ: ಕೆ.ಎಸ್.ಈಶ್ವರಪ್ಪ

ಸಚಿವ ಸ್ಥಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ: ಕೆ.ಎಸ್.ಈಶ್ವರಪ್ಪ

- Advertisement -
- Advertisement -

ಬೆಂಗಳೂರು: ಸಿಎಂ ಬೊಮ್ಮಾಯಿ ಅವರು ತಮ್ಮನ್ನು ಶೀಘ್ರದಲ್ಲಿಯೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳೋದಾಗಿ ಭರವಸೆ ನೀಡಿದ್ದಾರೆ. ಬೊಮ್ಮಾಯಿ ಮಾತು ಸಮಾಧಾನ ತಂದಿದೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ನನಗಷ್ಟೇ ಅಲ್ಲ ರಮೇಶ್ ಜಾರಕಿಹೊಳಿಗೂ ಕ್ಲೀನ್ ಚಿಟ್ ಸಿಕ್ಕಿರುವುದರಿಂದ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದು ಹೇಳಿದರು.

ನನಗೆ ಪ್ರಕರಣದಲ್ಲಿ ಕ್ಲೀನ್​ ಚಿಟ್ ಸಿಕ್ಕಿದೆ. ಕಳೆದ ನಾಲ್ಕು ತಿಂಗಳಿನಿಂದ ಖಾಸಗಿಯಾಗಿ ಸಿಎಂ ಜೊತೆ ಈ ಬಗ್ಗೆ ಮಾತನಾಡಿದ್ದೇನೆ. ಆದರೆ ಇದುವರೆಗೂ ನಮ್ಮನ್ನು ಸಂಪುಟಕ್ಕೆ ಸೇರಿಸಿಕೊಂಡಿಲ್ಲ. ನಮ್ಮ ಮೇಲೆ ಆರೋಪಗಳು ಕೇಳಿ ಬಂದ ಹಿನ್ನೆಲೆ ರಾಜೀನಾಮೆ ನೀಡಿದ್ದೇವೆ. ಈಗ ಆರೋಪ ಮುಕ್ತವಾಗಿ ಬಂದಿದ್ದೇವೆ. ಹಾಗಾಗಿ ನಮ್ಮನ್ನು ಸೇರಿಸಿಕೊಳ್ಳಿ. ಬೇರೆ ಯಾರಿಗೆಲ್ಲಾ ಅವಕಾಶ ನೀಡುತ್ತಾರೆ ಎಂಬುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು..

- Advertisement -

Latest News

error: Content is protected !!