Wednesday, July 3, 2024
Homeತಾಜಾ ಸುದ್ದಿಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಯಾರಾದರೂ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲು ಸಿಎಂ ಆದೇಶ

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಯಾರಾದರೂ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲು ಸಿಎಂ ಆದೇಶ

spot_img
- Advertisement -
- Advertisement -

ಬೆಂಗಳೂರು: ಹೈಕೋರ್ಟ್ ಮಧ್ಯಂತರ ತೀರ್ಪಿನ ವಿಚಾರದಲ್ಲಿ ಭಿನ್ನ ಭಿನ್ನ ಅಭಿಪ್ರಾಯಗಳು ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ವರಿಷ್ಠರ ಜೊತೆ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಿಎಂ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿ, ಐಜಿಪಿ, ಹಾಗೂ ಶಿಕ್ಷಣ ಇಲಾಖೆ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು. ವೀಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಿದ್ದು ಶಾಲೆ ಆವರಣದಲ್ಲಿ ಮತ್ತೆ ಗಲಾಟೆ, ಅಶಾಂತಿ ತಲೆದೋರದಂತೆ ನೋಡಿಕೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ.

ಸೋಮವಾರದಿಂದ ಹತ್ತನೇ ತರಗತಿಯ ವರೆಗೆ ಶಾಲೆ ಆರಂಭಿಸಲು ನಿರ್ಧರಿಸಿದ್ದು ಕೋರ್ಟ್ ಆದೇಶ ಪಾಲಿಸುವ ನಿಟ್ಟಿನಲ್ಲಿ ಸೂಕ್ತ ಬಂದೋಬಸ್ತ್ ನಡೆಸಲು ಸೂಚನೆ ನೀಡಲಾಗಿದೆ. ಕೋರ್ಟ್ ಕೊಟ್ಟಿರುವ ಆದೇಶದ ಹೊರತಾಗಿ ಹಿಜಾಬ್, ಕೇಸರಿ ಧರಿಸಿ ಬಂದ್ರೆ ನ್ಯಾಯಾಂಗ ನಿಂದನೆ ಆಗಲಿದೆ. ಹಾಗಾಗಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಯಾರಾದರೂ ಕಂಡು ಬಂದಲ್ಲಿ ಕ್ರಮ ಕೈಗೊಳ್ಳಲು ತಾಕೀತು ಮಾಡಿದ್ದಾರೆ.

ಹಿಜಾಬ್ ಮತ್ತು ಕೇಸರಿ ಶಾಲು ವಿಚಾರದಲ್ಲಿ ಅತಿ ಹೆಚ್ಚು ಗಲಾಟೆಯಾದ ಜಿಲ್ಲೆಗಳ ಶಾಲೆಗಳಿಗೆ ಹೆಚ್ಚು ಭದ್ರತೆ ನೀಡಲು ಸೂಚಿಸಿದ್ದಾರೆ. ಉಡುಪಿ, ಶಿವಮೊಗ್ಗ, ಬಾಗಲಕೋಟೆ, ಮೈಸೂರು, ಮಂಡ್ಯ, ಬೀದರ್, ಧಾರವಾಡ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಡಿಸಿ ಮತ್ತು ಎಸ್ಪಿಗೆ ಈ ಬಗ್ಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!