Sunday, June 7, 2026
Homeಕರಾವಳಿಉಡುಪಿಉಡುಪಿ: ವಾರದ ಹಿಂದೆ ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ !

ಉಡುಪಿ: ವಾರದ ಹಿಂದೆ ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ !

- Advertisement -
- Advertisement -

ಉಡುಪಿ: ಕಳೆದ ಒಂದು ವಾರದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವ ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರಂಬಳ್ಳಿ ವಿ.ಎಮ್ ನಗರದ ನಿವಾಸಿ ಶೇಖರ್ ಅವರ ಪುತ್ರ ಸತೀಶ್ ಕುಮಾರ್ (54) ಮೃತ ವ್ಯಕ್ತಿ.ಮಂಗಳವಾರ ಮೃತದೇಹ ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಹಾಯದಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಒಂದು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಹೊಂದಾಳಿ ಘಟನಾ ಸ್ಥಳದಲ್ಲಿದ್ದ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

- Advertisement -

Latest News

error: Content is protected !!