Wednesday, June 3, 2026
Homeತಾಜಾ ಸುದ್ದಿಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

- Advertisement -
- Advertisement -

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ನ್ಯಾಯಮೂರ್ತಿ ಕೆ.ಎಸ್.ಮುದುಗಲ್‌ ಹಾಗೂ ಟಿ.ವೆಂಕಟೇಶ ನಾಯಕ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ತೀರ್ಪು ನೀಡಿತ್ತು.

ಜೀವಾವಧಿ ಶಿಕ್ಷೆ ಜೊತೆಗೆ 5 ಲಕ್ಷ ರೂ ದಂಡ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮೈಸೂರು ಜಿಲ್ಲೆಯ ಕೆ.ಆರ್.‌ನಗರದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಪ್ರಕಟಿಸಲಾಗಿತ್ತು.

- Advertisement -

Latest News

error: Content is protected !!