- Advertisement -
![]()
- Advertisement -
ಉಳ್ಳಾಲ: ನೇಣುಬಿಗಿದ ಸ್ಥಿತಿಯಲ್ಲಿ ವಿಶೇಷ ಚೇತನ ಯುವತಿಯ ಮೃತದೇಹ ಪತ್ತೆಯಾಗಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯಲ್ಲಿ ನಡೆದಿದೆ. ಜ.30 ರಂದು ಸಂಜೆ ಈ ಪ್ರಕರಣ ಬೆಳಕಿಗೆ ಬಂದಿದೆ.
ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ಮೃತಪಟ್ಟ ಯುವತಿ. ಈಕೆ ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ವಾಸವಿದ್ದಳು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -


