- Advertisement -
- Advertisement -
ಸಾಗರ: ತಾಲೂಕಿನ ಕಲ್ಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಳಿಕೊಪ್ಪದಲ್ಲಿ ಹಾನಂಬಿ ಹೊಳೆಯ ಮೇಲ್ಭಾಗದಲ್ಲಿ ಯುವಕೋರ್ವನ ಮೃತದೇಹವು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ನ.27ರ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.
ಸಾಗರ ಪೇಟೆಯ ಜನ್ನತ್ ನಗರದ ನಿವಾಸಿ ಪ್ರಕಾಶ್ ಶೆಟ್ಟಿ (36) ಮೃತ ಯುವಕನೆಂದು ಗುರುತಿಸಲಾಗಿದೆ. ಈತ ಬಾರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ.
ಪ್ರಕಾಶ್ ಶೆಟ್ಟಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಕಾರಣ ಆತ್ಮಹತ್ಯೆ ಇರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಅಂದಾಜಿಸಲಾಗಿದೆ. ಆದರೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳ ಪರಿಶೀಲನೆ ನಡೆಸಿದ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿದ್ದಾರೆ.
- Advertisement -