Wednesday, November 18, 2026
Homeಕರಾವಳಿಉಡುಪಿಉಡುಪಿ ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

ಉಡುಪಿ ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ!

- Advertisement -
- Advertisement -

ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಕೊಳೆತ ಶವ ಮಂಗಳವಾರ ಪತ್ತೆಯಾಗಿದೆ. ಸುಮಾರು 10 ದಿನಗಳ ಹಿಂದೆ ವ್ಯಕ್ತಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಅನಾರೋಗ್ಯದಿಂದ ಸಾವನ್ನಪ್ಪಿರುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಮೃತರ ಹೆಸರು ಮತ್ತು ವಿಳಾಸದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮೃತರ ಕುಟುಂಬಸ್ಥರು ಅಥವಾ ಸಂಬಂಧಿಕರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಶವದಿಂದ ತೀವ್ರ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಸ್ಥಳದಿಂದ ತೆರವುಗೊಳಿಸಿ ಅಜ್ಜರಕಾಡಿನ ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ಉಡುಪಿ ನಗರ ಪೊಲೀಸ್ ಠಾಣೆಯ ಎಸ್‌ಐ ರತ್ನಾಕರ್ ಹಾಗೂ ಸಿಬ್ಬಂದಿಗಳಾದ ಆನಂದ್ ಗಾಣಿಗ, ಎಲ್ಲಲಿಂಗ ಮತ್ತು ಪ್ರಸನ್ನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಹಜರು ಪ್ರಕ್ರಿಯೆ ಪೂರ್ಣಗೊಳಿಸಿದರು.

- Advertisement -

Latest News

error: Content is protected !!