Sunday, June 7, 2026
Homeತಾಜಾ ಸುದ್ದಿಹಿಜಾಬ್ ತೆಗೆದಿಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ

ಹಿಜಾಬ್ ತೆಗೆದಿಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ

- Advertisement -
- Advertisement -

ಬೆಂಗಳೂರು: ಹಿಜಾಬ್ ಅನುಮತಿ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌‌ನಲ್ಲಿ ನಡೆಯುತ್ತಿದ್ದು, ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆಯಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು, ತರಗತಿಗೆ ಪ್ರವೇಶಿಸಲು ಅನುಕೂಲವಾಗುವಂತೆ, ಪ್ರತ್ಯೇಕ ಸ್ಥಳದಲ್ಲಿ ಹಿಜಾಬ್ ಇರಿಸಲು ವ್ಯವಸ್ಥೆ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಹೈಕೋರ್ಟ್ ಮಧ್ಯಂತರ ತೀರ್ಪಿನನ್ವಯ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿರುವ ವಿದ್ಯಾರ್ಥಿಗಳು ತರಗತಿಗಳಿಗೆ ಹಿಜಾಬ್ ಅನ್ನು ಧರಿಸಿ ಪ್ರವೇಶಿಸದಂತೆ ಸೂಚಿಸಿದೆ ಎಂದಿದ್ದಾರೆ.

ಇನ್ನು ಹಿಜಾಬ್ ತೆಗೆದು ತರಗತಿಗಳಿಗೆ ಪ್ರವೇಶಿಸಲು ಅನುಕೂಲವಾಗುವಂತೆ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಸ್ಥಳ ಕಲ್ಪಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದ್ದಾರೆ.

- Advertisement -

Latest News

error: Content is protected !!