Thursday, June 4, 2026
Homeಕರಾವಳಿಉಪ್ಪಿನಂಗಡಿ:ಟ್ಯಾಂಕರ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವು

ಉಪ್ಪಿನಂಗಡಿ:ಟ್ಯಾಂಕರ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವು

- Advertisement -
- Advertisement -

ಉಪ್ಪಿನಂಗಡಿ:ಟ್ಯಾಂಕರ್ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಿಶೋರ್ ಕುಮಾರ್ (53) ಮೃತ ಚಾಲಕ.

ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಗುರುವಾರದಂದು ಬೆಂಗಳೂರಿನಿಂದ ಮಂಗಳೂರಿನತ್ತ ಟ್ಯಾಂಕರ್ ಚಲಾಯಿಸುತ್ತಿದ್ದಾಗ ಉಪ್ಪಿನಂಗಡಿ ಸಮೀಪಿಸುತ್ತಿದ್ದಂತೆಯೇ ಹೃದಯಾಘಾತವಾಗಿದೆ.ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ ಚಾಲಕ ಟ್ಯಾಂಕರ್‌ನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅವರನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾದರಾದರೂ ಆಸ್ಪತ್ರೆಯಲ್ಲಿ ಅವರು ಮೃತ ಪಟ್ಟಿದ್ದಾರೆಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಿಶಾಂತ್ ಶೆಟ್ಟಿ ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!