- Advertisement -


- Advertisement -
ಬಂಟ್ವಾಳ: ಮಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಳ್ಳಿಮಾರ್‌ನಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಹಾಗೂ ದುರಸ್ತಿಗಾಗಿ ನಿಲ್ಲಿಸಿದ್ದ ಕ್ರೇನ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಬಿ.ಸಿ.ರೋಡು-ಧರ್ಮಸ್ಥಳ ರಸ್ತೆಯಲ್ಲಿ ಶನಿವಾರ (ನ.21) ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದ ಇಬ್ಬರು ಮೆಕ್ಯಾನಿಕ್‌ಗಳು ಸೇರಿದಂತೆ ಒಟ್ಟು ಮೂವರು ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
- Advertisement -


