Saturday, June 13, 2026
Homeಪ್ರಮುಖ-ಸುದ್ದಿಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು; ಕಾರು ಚಾಲಕ ಸ್ಥಳದಲ್ಲೇ...

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು; ಕಾರು ಚಾಲಕ ಸ್ಥಳದಲ್ಲೇ ಸಾವು

- Advertisement -
- Advertisement -

ಕೊಟ್ಟಿಗೆಹಾರ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 200 ಅಡಿ ಆಳದ ಪ್ರಪಾತಕ್ಕೆ ಬಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ನಡೆದಿದೆ.

ರಂಜನ್ (38) ಮೃತ ಚಾಲಕ. ಅಣಜೂರು ಜಯಮ್ಮನಾಗೇಶರವರ ಪುತ್ರರಾದ ಅವರು ಜನ್ನಪುರದಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಅವಘಡವು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ಸಂಭವಿಸಿದ್ದು, ತಡೆಗೋಡೆ ಇಲ್ಲದೆ ಏಕಾಏಕಿ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದೆ ಎನ್ನಲಾಗಿದೆ. ಇನ್ನು ಸಾರ್ವಜನಿಕರು ಈ ಕುರಿತು ಅಕ್ರೋಶ ವ್ಯಕ್ತಪಡಿಸಿದ್ದು, ತಡೆಗೋಡೆ ಇಲ್ಲದ ರಸ್ತೆಯೇ ಈ ಅಪಘಾತಕ್ಕೆ ಕಾರಣ ಎಂದಿದ್ದಾರೆ. ಈಗಾಗಲೇ ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಲಾಗಿದ್ದು, ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ದೂರಿದ್ದಾರೆ.

ಘಟನಾ ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಮರಣೊತ್ತರ ಪರಿಕ್ಷೆಗಾಗಿ ಮೃತ ದೇಹವನ್ನು ರವಾನೆ ಮಾಡಲಾಗಿದೆ.

- Advertisement -

Latest News

error: Content is protected !!