Friday, June 26, 2026
Homeಕರಾವಳಿಉಡುಪಿಉಡುಪಿ; ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಕಾಣಿಸಿಕೊಂಡ ಮೂರ್ಛೆ ರೋಗ; ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ...

ಉಡುಪಿ; ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಕಾಣಿಸಿಕೊಂಡ ಮೂರ್ಛೆ ರೋಗ; ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ ಬಸ್

- Advertisement -
- Advertisement -

ಉಡುಪಿ; ಖಾಸಗಿ ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡ ಪರಿಣಾಮ ಬಸ್ ಹಿಮ್ಮುಖವಾಗಿ ಚಲಿಸಿ ತೋಡಿಗೆ ಬಿದ್ದ ಘಟನೆ ಕೆಳಪರ್ಕಳದ ಬಳಿ ನಡೆದಿದೆ.

ಮಣಿಪಾಲದಿಂದ ಹೆರ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನಿಗೆ ಕೆಳಪರ್ಕಳದ ಬಳಿ ಬರುತ್ತಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡಿದೆ.ಕೂಡಲೇ ಚಾಲಕ ಸ್ಟೇರಿಂಗ್‌ ಬಿಟ್ಟಿದ್ದಾರೆ.

ಈ ವೇಳೆ ಬಸ್‌ ಹಿಮ್ಮುಖವಾಗಿ ಚಲಿಸಿದೆ. ಕೂಡಲೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಕ್ಕೆ ಹಾರಲು ಯತ್ನಿಸಿದ್ದಾರೆ. ಬಸ್‌ ತೋಡಿಗೆ ಬಿದ್ದು ಅಲ್ಲೇ ನಿಂತಿದೆ. ಸ್ವಲ್ಪ ಹಿಂದಕ್ಕೆ ತೆರಳುತ್ತಿದ್ದರೆ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆಯುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ಎಲ್ಲರೂ ಅಪಾಯವಿಲ್ಲದೇ ಪಾರಾಗಿದ್ದಾರೆ. ಬಸ್ಸಿನಲ್ಲಿ 30-40 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನನ್ನು ಕೂಡಲೇ ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

ಬಸ್ಸಿನ ಹಿಂಭಾಗ ಜಖಂಗೊಂಡಿದೆ.

- Advertisement -

Latest News

error: Content is protected !!